ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಮತ್ತು ವ್ಯಾಕ್ಸಿನೇಷನ್ ಪರಿಸ್ಥಿತಿ ಕುರಿತು ಉನ್ನತ ಸರ್ಕಾರಿ ಅಧಿಕಾರಿಗಳು ಭಾಗವಹಿಸುವ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೊರೊನಾ ವೈರಸ್ ನ ಬಿ.1.1.529 ರೂಪಾಂತರಿ ಬಗ್ಗೆ ಹೆಚ್ಚುತ್ತಿರುವ ಜಾಗತಿಕ ಕಾಳಜಿಯ ನಡುವೆ ಈ ಸಭೆ ನಡೆಸಲಾಗುತ್ತಿದೆ.
ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಹೊಸ ಕೊವೀಡ್-19 ರೂಪಾಂತರದ ‘ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಭಾರತವು ಹಲವಾರು ದೇಶಗಳನ್ನು ಕೊವೀಡ್ ಟೆಸ್ಟ್ ಸೇರಿ ಹೆಚ್ಚುವರಿ ಕ್ರಮ ಅನುಸರಿಸುವ ಪಟ್ಟಿಗೆ ಸೇರಿಸಿದೆ.
ಬಿ.1.1.529 ರೂಪಾಂತರವು ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಯಿತು. ಬೋಟ್ಸ್ವಾನಾ, ಹಾಂಗ್ ಕಾಂಗ್, ಇಸ್ರೇಲ್ ಮತ್ತು ಬೆಲ್ಜಿಯಂನಲ್ಲಿ – 50 ರೂಪಾಂತರಿ ಪ್ರಕರಣಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.