ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕಗಳು ಜಂಟಿಯಾಗಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಕಾಲೇಜಿನ ಶಿವರಾಮಕಾರಂತ ಸಭಾಭವನದಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಎರಡನೇ ಡೋಸ್ ಕೊವ್ಯಾಕ್ಸಿನ್ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದವು.
ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು (ಪದವಿ ಮತ್ತು ಸ್ನಾತಕೋತ್ತರ ಪದವಿ) ಲಸಿಕೀಕರಣದ ಲಾಭ ಪಡೆದುಕೊಂಡರು. ಈ ವೇಳೆ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯರೈ, ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿಡಾ. ಗಣಪತಿಗೌಡ, ವಿವಿ ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಮತ್ತು ರೆಡ್ ಕ್ರಾಸ್ ವಿದ್ಯಾರ್ಥಿ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಂಡರು.