ದೇಶದ ಜನತೆಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡಬೇಕು : ರಾಹುಲ್ ಗಾಂಧಿ ಆಗ್ರಹ

Prasthutha|

ಹೊಸದಿಲ್ಲಿ : ಕೋವಿಡ್ ನಿಂದ ಇಡೀ ದೇಶವೇ ತತ್ತರಿಸಿದ್ದು, ಈ ನಡುವೆ ಮೇ.1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ದೇಶದ ಜನತೆಗೆ ಕೊರೋನಾ ಲಸಿಕೆಯನ್ನು ಉಚಿತವಾಗಿ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಚರ್ಚೆಗಳು ಬಹಳ ನಡೆಯುತ್ತಿದೆ. ದೇಶದ ಜನತೆಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡಬೇಕು. ಭಾರತವನ್ನು ಬಿಜೆಪಿ ವ್ಯವಸ್ಥೆಯ ಬಲಿಪಶುವನ್ನಾಗಿ ಮಾಡಬೇಡಿ ಎಂದು ಹೇಳಿದ್ದಾರೆ.

ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಗೆ ದರ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಒಂದು ಡೋಸ್ ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗೆ 1,200 ರೂ. ದರದಲ್ಲಿ ಪೂರೈಕೆ ಮಾಡುವುದಾಗಿ ಹೇಳಿದೆ.



Join Whatsapp