ಕೋವಿಡ್19 ನಿಯಂತ್ರಣ ಕಾರ್ಯಪಡೆ ಸಮಿತಿ ಸಭೆ

Prasthutha|

ಮಡಿಕೇರಿ : ಸರ್ಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ವೈರಸ್ ಸಂಬಂಧಿಸಿದಂತೆ ಯಾವುದೇ ರೀತಿಯ ಉದಾಸೀನ ಮಾಡದೆ, ಅಗತ್ಯ ಮುನ್ನೆಚ್ಚರ ವಹಿಸುವಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸೂಚಿಸಿದರು.

- Advertisement -


ತಾಲ್ಲೂಕಿನ ವಿವಿಧ ಗ್ರಾ.ಪಂ.ಗಳ ಕೋವಿಡ್19 ನಿಯಂತ್ರಣ ಕಾರ್ಯಪಡೆ ಸಮಿತಿ ಸಭೆಯು ಶಾಸಕ ಕೆ.ಜಿ.ಬೋಪಯ್ಯ ಅಧ್ಯಕ್ಷತೆಯಲ್ಲಿ ನಗರದ ತಾಲ್ಲೂಕು ಪಂಚಾಯತ್ ಸಾಮಥ್ರ‍್ಯ ಸೌಧ ಸಭಾಂಗಣದಲ್ಲಿ ನಡೆಯಿತು.


ಅರ್ಹರೆಲ್ಲರೂ ಕೋವಿಡ್ ನಿಯಂತ್ರಣ ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಮನವರಿಕೆ ಮಾಡುವಂತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು. ಸಭೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಪಿ.ಲಕ್ಷ್ಮಿ, ತಾ.ಪಂ.ಇಒ ಶೇಖರ್, ತಹಶೀಲ್ದಾರ್ ಮಹೇಶ್, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್ ಇತರರು ಇದ್ದರು.



Join Whatsapp