Home ಟಾಪ್ ಸುದ್ದಿಗಳು 7ರಿಂದ 11 ವರ್ಷದ ವರೆಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಶಿಫಾರಸು

7ರಿಂದ 11 ವರ್ಷದ ವರೆಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಶಿಫಾರಸು

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದಂತೆಯೇ 7ರಿಂದ 11 ವರ್ಷದ ವರೆಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ ಕೋರಿ ಕೇಂದ್ರಿಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಶಿಫಾರಸು ಮಾಡಿದೆ. ಸೆರಮ್ ಇನ್ಸ್ಟಿ ಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಎಸ್ಇಸಿ ತಜ್ಞರ ತಂಡ ಶಿಫಾರಸು ಮಾಡಿದೆ.

ಸೀರಮ್ ಇನ್ಸ್ಟಿ ಟ್ಯೂಟ್ ಆಫ್ ಇಂಡಿಯಾ 7 ರಿಂದ 11 ವರ್ಷದ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ಮತ್ತಷ್ಟು ಮಾಹಿತಿ ನೀಡುವಂತೆ ಸೀರಮ್ ಗೆ ತಜ್ಞರ ಸಮಿತಿಯು ಸೂಚನೆಯನ್ನು ನೀಡಿತ್ತು.

ಈ ಹಿಂದೆ ಡಿಸಿಜಿಐ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು.

Join Whatsapp
Exit mobile version