Home ಟಾಪ್ ಸುದ್ದಿಗಳು ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ: ಅಪಹರಣ ಶಂಕೆ

ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ: ಅಪಹರಣ ಶಂಕೆ

ರಾಮನಗರ: ಬಿಜೆಪಿ ನಾಯಕ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಭಾವ ಹಾಗೂ ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರು ಅನುಮಾನಾಸ್ಪದವಾಗಿ ಕಾಣೆಯಾಗಿದ್ದಾರೆ.

62 ವರ್ಷದ ಮಹದೇವಯ್ಯ ಅವರು ಗ್ರಾಮದ ತೋಟದ ಮನೆಯಲ್ಲಿ ಅವರು ವಾಸವಿದ್ದರು. ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ, ಮನೆಯಲ್ಲಿ ಅವರೊಬ್ಬರೇ ಇದ್ದರು. ಮಧ್ಯಾಹ್ನ ಸ್ಥಳೀಯರು ಮನೆಗೆ ಹೋಗಿದ್ದಾಗ, ಮಹದೇವಯ್ಯ ಅವರು ಇರಲಿಲ್ಲ. ಬೆಡ್ ರೂಮ್ ನ ಅಲ್ಮೆರಾ ತೆರೆದಿದ್ದು, ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಾಗಾಗಿ, ಯಾರೋ ಅವರನ್ನು ಅಪಹರಿಸಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿರುವ ಅನುಮಾನ ವ್ಯಕ್ತವಾಗಿದ್ದು, ಕೂಡಲೇ ಕುಟುಂಬದವರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರ ಸಹೋದರ ಸಿ.ಪಿ.ರಾಜೇಶ್ ಅವರು, ತೋಟದ ಮನೆಗೆ ಬಂದು ನೋಡಿದಾಗ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆಗಿತ್ತು. ಬೇರೆ ಬೇರೆ ಕಾರು ಓಡಾಡಿರುವ ಸಾಧ್ಯತೆ ಇದೆ. ಹೀಗಾಗಿ ಮಹದೇವಯ್ಯರನ್ನು ಅಪಹರಣ ಮಾಡಿರುವ ಅನುಮಾನ ಇದೆ. ಅದಕ್ಕೆ ನಾವು ಪೊಲೀಸರಿಗೆ ವಿಚಾರ ತಿಳಿಸಿದ್ದೇವೆ ಎಂದಿದ್ದಾರೆ.

Join Whatsapp
Exit mobile version