ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ

Prasthutha|

ಬೆಂಗಳೂರು: ಕರಾವಳಿ ಭಾಗದಲ್ಲಿ ಚುನಾವಣೆ ರಂಗೇರುತ್ತಿದ್ದು, ವಿವಿಧ ಪಕ್ಷಗಳು ಜಯಗಳಿಸಲು ಕಸರತ್ತು ನಡೆಸುತ್ತಿವೆ. ಈ ನಡುವೆ ಸಿಪಿಐ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿವೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಸಿಪಿಐ, ಈ ಚುನಾವಣೆ ಹಿಂದಿನ ಚುನಾವಣೆಗಳಿಂದ ವಿಭಿನ್ನವಾಗಿದೆ. ರಾಜ್ಯದ ಜನತೆಯ, ಕಾರ್ಮಿಕರ, ರೈತರ, ವಿದ್ಯಾರ್ಥಿಗಳ, ಯುವಜನರ, ಮಹಿಳೆಯರ ಹಾಗೂ ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಹಾಗೂ ದೇಶದ ಸಂವಿಧಾನದ ಉಳಿವಿಗಾಗಿ ಈ ಚುನಾವಣೆಗಳಲ್ಲಿ ಬಲಪಂಥೀಯ, ಮತಾಂಧ ಸ್ವಜನಹಿತ ಪಕ್ಷಗಳನ್ನು ಸೋಲಿಸುವ ಅಗತ್ಯತೆ ಹಿಂದೆಂದಿಗಿಂತಲೂ ಹೆಚ್ಚಿದೆ.

ಇದಕ್ಕಾಗಿ ರಾಜ್ಯದ ಹಲವೆಡೆ ಭಾರತ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಉಳಿದೆಡೆ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲು ಸಿಪಿಐ ರಾಜ್ಯ ಸಮಿತಿ ನಿರ್ಧರಿಸಿದೆ.

- Advertisement -

 ಈ ಬಗ್ಗೆ ಭಾರತ ಕಮ್ಯುನಿಸ್ಟ್ ಪಕ್ಷದ ದ. ಕ ಮತ್ತು ಉಡುಪಿ ಜಿಲ್ಲಾ ಸಮಿತಿ ಸಭೆ ಸೇರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದೆ. ಈ ಎರಡು ಜಿಲ್ಲೆಗಳ, ಮತದಾರ ಬಾಂಧವರು, ರಾಜ್ಯದ ಹಾಗೂ ದೇಶದ ಉಳಿವಿಗಾಗಿ ತಮ್ಮ ಅಮೂಲ್ಯವಾದ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದಿಂದ ಆರಿಸಿ ಬರುವಂತೆ ಸಹಕರಿಸಬೇಕೆಂದು ಹೇಳಿದೆ.