ನೈತಿಕ ಪೋಲಿಸ್ ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ — CPIM ತೀವ್ರ ಆತಂಕ

Prasthutha|

ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ.ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದು CPIM ತೀವ್ರ ಆತಂಕ ವ್ಯಕ್ತಪಡಿಸಿದೆ.

- Advertisement -

ಬಿಜೆಪಿ ಸಂಘಪರಿವಾರ ತನ್ನ ಗುಪ್ತ ಅಜೆಂಡಾಗಳನ್ನು ಬಹಳ ವ್ಯವಸ್ಥಿತವಾಗಿ ಜಾರಿಗೊಳಿಸುತ್ತಿದ್ದು, ಶಿಕ್ಷಣ, ಉದ್ಯೋಗ,ಆರೋಗ್ಯ ಸೇರಿದಂತೆ ಜನರ ಬದುಕಿನ ವಿಚಾರಗಳನ್ನು ಬದಿಗೆ ಸರಿಸಿ ಕೇವಲ ಹಿಂದುತ್ವದ ಅಮಲನ್ನು ಯುವಜನತೆಯ ತಲೆಗೇರಿಸಿ ಕೋಮುದ್ವೇಷದಿಂದಲೇ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ.ಇದರಿಂದಾಗಿ ಪುಂಡುಪೋಕರಿಗಳು ಕಾನೂನನ್ನು ಕೈಗೆತ್ತಿ ಅಮಾಯಕರ ಮೇಲೆ ಧಾಳಿ ನಡೆಸುವ ಮೂಲಕ ಸಂಘಪರಿವಾರ ತನ್ನ ತಾಲಿಬಾನ್ ಸಂಸ್ಕ್ರತಿಯನ್ನು ಪ್ರದರ್ಶಿಸುತ್ತಿದೆ.ಇದನ್ನು ಕೂಡಲೇ ಮಟ್ಟ ಹಾಕಲು ಜಿಲ್ಲೆಯ ಪೋಲಿಸ್ ಇಲಾಖೆ ಹಾಗೂ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ಸಾರೆ.

Join Whatsapp