ದಲಿತ ಮಹಿಳೆ ಮೇಲಿನ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸಿಪಿಐ(ಎಂ) ಆಗ್ರಹ

Prasthutha|

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ಅಕ್ಟೋಬರ್‌ 03, 2021ರಂದು ಅಳ್ಳಳ್ಳಿ ಗ್ರಾಮದ ಗಂಗಪ್ಪ, ಬಸಪ್ಪ ಮತ್ತು ಇತರರು ಸೇರಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಯತ್ನ ಮಾಡಿ, ಆಕೆ ಪ್ರತಿಭಟಿಸಿದಾಗ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಅಮಾನವೀಯ ಘಟನೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತೀವ್ರವಾಗಿ ಖಂಡಿಸಿದೆ.

- Advertisement -

ಯಾದಗಿರಿ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ತೀವ್ರಗೊಳ್ಳುತ್ತಿರುವುದಕ್ಕೆ ಸಂಬಂಧಿಸಿ ಸಿಪಿಐ(ಎಂ) ತೀವ್ರ ಆತಂಕವನ್ನು ವ್ಯಕ್ತಪಡಿಸಿದೆ. ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ನಿಸ್ಪಕ್ಷಪಾತವಾಗಿ ತಮ್ಮ ಪ್ರಾಥಮಿಕ ಹೇಳಿಕೆಗೆ ಬದ್ಧವಾಗಿ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಕ್ರಮವಹಿಸಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ ಪರಿಹಾರ ನೀಡಬೇಕು ಎಂದು ಸಿಪಿಐ(ಎಂ) ರಾಜ್ಯ ಸಮಿತಿ ಆಗ್ರಹಿಸಿದೆ.

Join Whatsapp