ಕಾವೇರಿದ ಭಬಾನಿಪುರ ಉಪಚುನಾವಣೆ : ಮುಖ್ಯಮಂತ್ರಿ ಮಮತಾ ವಿರುದ್ಧ ಸ್ಪರ್ಧೆಗಿಳಿದ ಬಿಜೆಪಿ, ಸಿಪಿಐ(ಎಂ) ಅಭ್ಯರ್ಥಿಗಳು

Prasthutha|

ಕೋಲ್ಕತ್ತಾ; ಪಶ್ಚಿಮ ಬಂಗಾಳದ ಭಬಾನಿಪುರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮುಖ್ಯಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸಿಪಿಐ(ಎಂ) ಮತ್ತು ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

- Advertisement -

ಪ್ರಸಕ್ತ ಭಬಾನಿಪುರ ಕ್ಷೇತ್ರಕ್ಕೆ ಸೆಪ್ಟೆಂಬರ್ 30 ರಂದು ನಡೆಯುವ ಉಪ ಚುನಾವಣಾ ರಂಗ ಕಾವೇರಿದ್ದು, ಸಿಪಿಐ(ಎಂ) ಅಭ್ಯರ್ಥಿಯಾಗಿ ಶ್ರೀಜಿಬ್ ಬಿಸ್ವಾಸ್ ಸ್ಪರ್ಧಿಸಲಿದ್ದಾರೆ. ಅದೇ ರೀತಿ ಬಿಜೆಪಿ ಅಭ್ಯರ್ಥಿಯಾಗಿ ವಕೀಲೆ ಪ್ರಿಯಾಂಕ ತಿಬ್ರೆವಾಲ್ ಅವರು ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸೋಮೆಂದು ಅಧಿಕಾರಿ ವಿರುದ್ಧ ಸೋತು ಮುಖ್ಯಮಂತ್ರಿ ಹುದ್ದೆಗೇರಿದ ಮಮತಾ ಬ್ಯಾನರ್ಜಿ ಚುನಾವಣೆಯಲ್ಲಿ ಗೆಲ್ಲುವ ಅನಿವಾರ್ಯತೆಗೆ ಸಿಲುಕಿರುವ ಹಿನ್ನೆಲೆಯಲ್ಲಿ ಟಿಎಂಸಿ ಶಾಸಕ ಸೋವೆಂದೇಬ್ ಚಟ್ಟೋಪಾಧ್ಯಾಯ ಅವರು ಭಬಾನಿಪುರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.

- Advertisement -

ಮೂರು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ಸೆಪ್ಟೆಂಬರ್ 6 ರಂದು ಅಧಿಸೂಚನೆ ಹೊರಡಿಸಿದೆ. ಈ ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 30 ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಈ ತಿಂಗಳ 13 ಕೊನೆಯ ದಿನವಾಗಿದೆ. ಆಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ.



Join Whatsapp