ತಿರುವನಂತಪುರಂ: 2008 ರಲ್ಲಿ ಕೇರಳದ ರಾಜ್ಯದ ರಾಜಧಾನಿ ತಿರುವನಂತಪುರಂ ಸಮೀಪದ ಕೈಥಮುಕ್ಕು ಎಂಬಲ್ಲಿ ಸಿಪಿಐಎಂ ಸದಸ್ಯ ವಿ ವಿ ವಿಷ್ಣು ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ 13 ಆರೋಪಿಗಳು ಆರೆಸ್ಸೆಸ್ ಕಾರ್ಯಕರ್ತರಾಗಿದ್ದು, ಅವರನ್ನು ಕೇರಳ ಹೈಕೋರ್ಟ್ ದೋಷಮುಕ್ತಗೊಳಿಸಿ ಆದೇಶ ನೀಡಿದೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಇವರೆಲ್ಲರನ್ನೂ ಅಪರಾಧಿ ಘೋಷಿಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಹೈಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್’ನ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಸಿ ಜಯಚಂದ್ರನ್ ಅವರನ್ನೊಳಗೊಂಡ ಪೀಠ ಈ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ ಮತ್ತು ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.