ಮಂಗಳೂರು; ಮರವೂರು ಸೇತುವೆಯ ಪಿಲ್ಲರ್ ಕುಸಿತ: ವಾಹನ ಸಂಚಾರ ಸ್ಥಗಿತ

Prasthutha: June 15, 2021

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಜ್ಪೆಯ ಮರವೂರು ಬಳಿ ಪಲ್ಗುಣಿ ಸೇತುವೆಯ ಎರಡು ಪಿಲ್ಲರ್ ಗಳು ಕುಸಿದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಸೇತುವೆಯ ಒಂದು ಎರಡು ಪಿಲ್ಲರ್ ಕುಸಿದಿದ್ದು, ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಬಿರುಕು ಕಾಣಿಸಿಕೊಂಡಿದ್ದು, ಈ ಮಾರ್ಗದಲ್ಲಿ ಸಂಚರಿಸಿದ ವಾಹನ ಸವಾರರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.


ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.ನಿನ್ನೆ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ. ಬಜ್ಪೆ ಏರ್ಪೋರ್ಟ್ ಕಡೆಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.


ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ. ಇಲ್ಲಿ ಹೊಸ ಸೇತುವೆ ಕಾಮಗಾರಿ ನಡಿತಿದ್ದು ಹೀಗಾಗಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಸೇತುವೆ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆ ಬಿರುಕು ಬಿಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕ ಕಲ್ಪಿಸುವ ಪಲ್ಗುಣಿ ನದಿ ಸೇತುವೆ ಮಧ್ಯರಾತ್ರಿ 3 ಗಂಟೆಗೆ ಕುಸಿದಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಉಡುಪಿಯಿಂದ ಬರುವವರು ಮೂಲ್ಕಿ, ಕಿನ್ನಿಗೋಳಿ, ಕಟೀಲು, ಬಜ್ಪೆ ಮೂಲಕ ಹಾಗೂ ಕಾಸರಗೋಡು, ಮಂಗಳೂರಿನಿಂದ ಬರುವವರು ನಂತೂರು, ವಾಮಂಜೂರು, ಗುರುಪುರ, ಕೈಕಂಬ, ಬಜ್ಪೆ ರಸ್ತೆಯಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ