Home ಟಾಪ್ ಸುದ್ದಿಗಳು ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್: ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್: ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ   ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಎಂಬಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಬೆಟ್ಟಿಂಗ್  ನಡೆಸಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33) ಮತ್ತು ಮರಕಡ  ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000 ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000.  ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಪತ್ತೆ ಕಾರ್ಯ ಮುಂದುವರಿದಿದೆ.

Join Whatsapp
Exit mobile version