Home ಟಾಪ್ ಸುದ್ದಿಗಳು ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸಿ ಗೆದ್ದ ಕ್ರಿಕೆಟಿಗ ಯೂಸುಫ್ ಪಠಾಣ್

ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸಿ ಗೆದ್ದ ಕ್ರಿಕೆಟಿಗ ಯೂಸುಫ್ ಪಠಾಣ್

ಪಶ್ಚಿಮ ಬಂಗಾಳ: ಈ ಸಲದ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟಿಗ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಗೆದ್ದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್ ಪಠಾಣ್, ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿದ್ದಾರೆ.

ಯೂಸುಫ್ ಪಠಾಣ್ 4,08,240 ಮತಗಳನ್ನು ಪಡೆದು ಸಮೀಪಸ್ಪರ್ಧಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ವಿರುದ್ಧ 59,351 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧೀರ್ ರಂಜನ್ ಚೌಧರಿ 3,48,889 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ 3,12,876 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

Join Whatsapp
Exit mobile version