ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಸಿಎಂ ಎಚ್ಚರಿಕೆ

Prasthutha|

ಹಾವೇರಿ: ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಮಂಗಳವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.


ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಜೂನ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು.

Join Whatsapp