ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಡಿಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

- Advertisement -

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

- Advertisement -

ಪ್ರಕರಣದಲ್ಲಿ ಸಹ-ಆರೋಪಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ (ಕೆಪಿಸಿಸಿ) ನ್ಯಾಯಾಲಯವು ಮಧ್ಯಂತರ ಪರಿಹಾರ ನೀಡಿದೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಿಎಸ್ ಕೇಶವ ಪ್ರಸಾದ್ ಎಂಬುವವರು ಸಲ್ಲಿಸಿದ್ದ ಪ್ರಕರಣ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದರು. ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದ್ದು, ಮುಂದಿನ ಆದೇಶದವರೆಗೆ ಸದ್ಯದ ವಿಚಾರಣೆಗೆ ತಡೆ ನೀಡಿದ್ದಾರೆ.

- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ವಿವಾದಾತ್ಮಕ ಜಾಹೀರಾತುಗಳನ್ನು ಪ್ರಕಟಿಸಿದ ನಂತರ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು.

- Advertisement -


Must Read

Related Articles