Home ಟಾಪ್ ಸುದ್ದಿಗಳು ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು: ಹಿಮಾಚಲದತ್ತ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು: ಹಿಮಾಚಲದತ್ತ ಡಿ.ಕೆ.ಶಿವಕುಮಾರ್

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ನ ಆರು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಿದ್ದರು. ಇದರ ಬೆನ್ನಲ್ಲೇ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಗೊಳಿಸಲು ಕಾಂಗ್ರೆಸ್ ಮುಂದಾಗಿದೆ.


ಬಿಜೆಪಿಗೆ ಮತ ಚಲಾಯಿಸಿರುವ ಆರು ಶಾಸಕರು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಮಾತುಕತೆ ನಡೆಸುವಂತೆ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದಾರೆ.

Join Whatsapp
Exit mobile version