Home ಟಾಪ್ ಸುದ್ದಿಗಳು ಕೊಕಾ-ಕೋಲಾ ದೂರ ಸರಿಸಿ, ನೀರು ಕುಡಿಯಿರಿ ಎಂದ ರೊನಾಲ್ಡೊ!

ಕೊಕಾ-ಕೋಲಾ ದೂರ ಸರಿಸಿ, ನೀರು ಕುಡಿಯಿರಿ ಎಂದ ರೊನಾಲ್ಡೊ!

ಪೋರ್ಚುಗಲ್: ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಪತ್ರಿಕಾಗೋಷ್ಠಿಯೊಂದರಲ್ಲಿ ಕೊಕಾ-ಕೋಲಾ ಬಾಟಲಿಗಳನ್ನು ದೂರ ಸರಿಸಿ ನೀರು ಕುಡಿಯಿರಿ ಎಂದು ಹೇಳಿದ್ದು ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಂಗೇರಿ ವಿರುದ್ಧದ ಯುರೋ 2020 ಪಂದ್ಯಕ್ಕೂ ಮುನ್ನ ಪೋರ್ಚುಗಲ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮೇಜಿನ ಮೇಲೆ ಇಟ್ಟಿದ್ದ ಕೊಕಾ-ಕೋಲಾ ಬಾಟಲಿಗಳನ್ನು ನೋಡಿದ ರೊನಾಲ್ಡೊ ಬಾಟಲಿಗಳನ್ನು ದೂರ ಸರಿಸಿ ನಂತರ ನೀರಿನ ಬಾಟಲಿಗಳನ್ನು ಕೈಗೆತ್ತಿಕೊಂಡು ಎಲ್ಲರೂ ಕೋಲಾ ಬದಲಿಗೆ ನೀರು ಕುಡಿಯಿರಿ ಎಂದು ಹೇಳಿದ್ದಾರೆ.

ಯುರೋ 2020ರ ಪಂದ್ಯಾವಳಿಗೆ ಕೊಕಾ ಕೋಲಾ ಅಧಿಕೃತ ಪ್ರವರ್ತಕನಾಗಿದ್ದರೂ ರೊನಾಲ್ಡೋ ವರ್ತನೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರಸ್ತುತ ಟೂರ್ನಿಯಲ್ಲಿ ಪೋರ್ಚುಗಲ್ ಗುಂಪು ಎಫ್ ನಲ್ಲಿ ಹಂಗೇರಿ, ಫ್ರಾನ್ಸ್ ಮತ್ತು ಜರ್ಮನ್ ಒಳಗೊಂಡಿದೆ. ವಿಶ್ವಕಪ್ ಚಾಂಪಿಯನ್ ಫ್ರಾನ್ಸ್, ಜರ್ಮನಿಯನ್ನು ಎದುರಿಸಲಿದೆ. ಜರ್ಮನ್ 2014ರಲ್ಲಿ ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತ್ತು.

Join Whatsapp
Exit mobile version