ಜಾಗತಿಕವಾಗಿ ಕಚ್ಚಾತೈಲ ಬೆಲೆ ಇಳಿಕೆಯಾದ್ರೂ ಭಾರತದಲ್ಲಿ ಕಡಿಮೆ ಇಲ್ಲ: ಖರ್ಗೆ ವಿಷಾದ

Prasthutha|

ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದೆ. ಆದರೆ ಅಚ್ಚೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ಕಿಡಿಗಾರಿದ್ದಾರೆ.

- Advertisement -

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಚಾರ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದೆ, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಲೂಟಿಗೆ ಯಾವುದೇ ನಿಯಂತ್ರಣವಿಲ್ಲ. ಇದಾಗಿದೆ ಅವರ ಅಚ್ಚೇ ದಿನ್ ಎಂದು ವಿಷಾದಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆಯಲ್ಲಿ ಭಾರೀ ಏರಿಳಿತ ಉಂಟಾಗುತ್ತಿದೆ. ಬಹುತೇಕ ಕಡಿಮೆಯಾಗುತ್ತಿದೆ. ಹೀಗಾಗಿ ದೇಶದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ಸದ್ಯಕ್ಕೆ ತೈಲ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

Join Whatsapp