ಮುಂಬೈ: ಕ್ರೂಸ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ (ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ) ಎನ್ಸಿಬಿ ಶುಕ್ರವಾರ ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಬಳಿಕ ಡ್ರಗ್ಸ್ ವಿರೋಧಿ ಸಂಸ್ಥೆ 14 ಆರೋಪಿಗಳನ್ನು ಹೆಸರಿಸಿ 6000 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದು, ಆರ್ಯನ್ ಖಾನ್ ವಿರುದ್ಧದ ಆರೋಪಪಟ್ಟಿಯನ್ನು ಇಂದು ಎನ್ಸಿಬಿಯು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ಪ್ರಕರಣದಲ್ಲಿ ಆರ್ಯನ್ ಖಾನ್ಗೆ ಕ್ಲೀನ್ ಚಿಟ್ ಸಿಕ್ಕಿದೆ. ಇನ್ನು ಈ ಪ್ರಕರಣದಲ್ಲಿ 14 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ 6 ಮಂದಿ ವಿರುದ್ಧ ದೂರು ದಾಖಲಾಗಿರಲಿಲ್ಲ.
ಮೇ 29ರಂದು ಚಾರ್ಜ್‌ಶೀಟ್ ಸಲ್ಲಿಸಲು 60 ದಿನಗಳ ವಿಸ್ತರಣೆಯು ಮುಕ್ತಾಯಗೊಳ್ಳುತ್ತಿದ್ದಂತೆ ಎನ್‌ಸಿಬಿ ಅಂತಿಮ ಆರೋಪಪಟ್ಟಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆರ್ಯನ್ ಖಾನ್ ಬಳಿ ದಾಳಿ ವೇಳೆ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ತಿಳಿಸಿರುವುದಾಗಿ ಹಿರಿಯ ಎನ್‌ಸಿಬಿ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.