ಗುಬ್ಬಿ: ಎಸಿಬಿ ಬಲೆಗೆ ಬಿದ್ದಿದ್ದ ಸಬ್ ಇನ್ಸ್ಪೆಕ್ಟರೊಬ್ಬರು ವಿಚಾರಣೆ ಸಮಯದಲ್ಲಿ ಓಡಿಹೋಗಿ ತಪ್ಪಿಸಿಕೊಂಡ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆರೋಪಿ ಠಾಣೆಯಿಂದ ತಪ್ಪಿಸಿ ಓಡಿ ಹೋಗುತ್ತಿರುವ ದೃಶ್ಯ ವೈರಲಾಗಿದೆ.
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಸಬ್ಇನ್ಸ್ಪೆಕ್ಟರ್ ಸೋಮಶೇಖರ್ ನನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿಯಲು ಪ್ರಯತ್ನ ನಡೆಸಿದ್ದಾರೆ. ಆದರೆ ಆರೋಪಿ ಪೊಲೀಸರೊಬ್ಬರ ಬೈಕ್ ತೆಗೆದುಕೊಂಡು ಯಾರ ಕೈಗೂ ಸಿಗದೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಲಂಚ ಪಡೆದಿದ್ದ ಬಗ್ಗೆ ವಿಚಾರಣೆ ವೇಳೆ ಎಸಿಬಿ ಪೊಲೀಸರು ಬಂಧಿಸುವ ಭಯದಿಂದ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.