ಭಾರತಕ್ಕೆ ಸ್ವಾತಂತ್ರ್ಯ ದೊರೆತದ್ದು ಸಿ.ಟಿ ರವಿ ಅವರಿಂದಲೇ | ಡಿ.ಕೆ.ಶಿ ವ್ಯಂಗ್ಯ

Prasthutha|

ಬೆಂಗಳೂರು : ಭಾರತ ದೇಶಕ್ಕೆ ಸಿ.ಟಿ ರವಿ ಅವರಿಂದಲೇ ಸ್ವಾತಂತ್ರ್ಯ ಬಂದಿದೆ ಎಂದು KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.

- Advertisement -

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ವಿನಯ್ ಕುಲಕರ್ಣಿ ಅವರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ವಿನಯ್ ಕುಲಕರ್ಣಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಾಗಿದ್ದು, ಅವರ ಮೇಲೆ ಕೊರೊನಾ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವುದು ಸಂತೋಷ. ಆದರೆ, ಇದೇ ರೀತಿ ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕೇಂದ್ರ ಸಚಿವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

- Advertisement -

ಶಾಸಕ ಜಮೀರ್ ಅಹ್ಮದ್ ಕಚೇರಿ ಮತ್ತು ನಿವಾಸಕ್ಕೆ ಇಡಿ ದಾಳಿ ನಡೆಸಿದ ಕುರಿತು ಪ್ರತಿಕ್ರಿಯಿಸಿದ ಅವರು, “ಇಡಿ ದಾಳಿ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಅವರು ಸ್ಪಷ್ಟನೆ ನೀಡಿದ್ದು, ನಿರಪರಾಧಿಗಳಿಗೆ, ರಾಜಕೀಯ ದ್ವೇಷದ ದಾಳಿಗೆ ಒಳಗಾದವರಿಗೆ ನಾವು ಸ್ಪಂದಿಸಬೇಕು” ಎಂದು ಹೇಳಿದ್ದಾರೆ. ಬಿಜೆಪಿ ವಿರುದ್ದ ಮಾತನಾಡಿದವರನ್ನು ಕೇಂದ್ರ ಸರಕಾರ ಇ.ಡಿ , ಸಿಬಿಐ ಮುಂತಾದ ಸಂಸ್ಥೆಗಳಿಂದ ಬೆದರಿಸುವ ಹೀನ ಮಟ್ಟಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp