ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ಸಿ.ಟಿ ರವಿ: ವ್ಯಾಪಕ ಆಕ್ರೋಶ

Prasthutha|

ತ್ರಿವರ್ಣ ಧ್ವಜವನ್ನು ವಿರೋಧಿಸುವ RSSನ ಸಿದ್ಧಾಂತವನ್ನು ಬಿಜೆಪಿ ಚಾಚೂ ತಪ್ಪದೆ ಪಾಲಿಸುತ್ತಿದೆ ಎಂದ ಕಾಂಗ್ರೆಸ್

- Advertisement -


ಮಂಡ್ಯ: ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಧ್ವಜ ವಿವಾದದ ಕುರಿತು ಮಾತನಾಡುವಾಗ ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ’ ಮಾಡಿದ್ದಾರೆ.

ಧ್ವಜ ವಿವಾದದ ಬಗ್ಗೆ ಸುದ್ದಿ ಸಂಸ್ಥೆ ಎಎನ್ ಐ ಜೊತೆ ಹಿಂದಿಯಲ್ಲಿ ಮಾತನಾಡಿದ ಸಿ.ಟಿ ರವಿ, “ಹನುಮ ಧ್ವಜವನ್ನು ಕೆಳಗಿಳಿಸಿ ತಾಲಿಬಾನ್ ಧ್ವಜವನ್ನು ಹಾರಿಸಿದ್ದಾರೆ ಎಂದು ಹೇಳಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನು ಸಿ.ಟಿ ರವಿಯ ಹೇಳಿಕೆ ಬಗ್ಗೆ ರಾಜ್ಯ ಕಾಂಗ್ರೆಸ್ ಕಿಡಿಕಾರಿದ್ದು, “ಪವಿತ್ರವಾದ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ದೇಶದ್ರೋಹಿ ಬಿಜೆಪಿಯ ಸಿ.ಟಿ ರವಿ ಎನ್ನುವ ಕೋಮು ಕ್ರಿಮಿ ದೇಶದ ಘನತೆಯನ್ನು ಮಣ್ಣುಪಾಲು ಮಾಡುವ ಹೇಳಿಕೆ ನೀಡಿದ್ದಾರೆ. ತ್ರಿವರ್ಣ ಧ್ವಜ ಈಗ ಬಿಜೆಪಿ ಪ್ರಕಾರ ತಾಲಿಬಾನ್ ಧ್ವಜವಾಗಿದೆಯೇ?. ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್.ಎಸ್.ಎಸ್ನ ಸಿದ್ಧಾಂತವನ್ನು ಬಿಜೆಪಿ ಚಾಚೂ ತಪ್ಪದೆ ಪಾಲಿಸುತ್ತಿದೆ” ಎಂದಿದೆ.
ಬಿಜೆಪಿಗೆ INDIA ಮೇಲೂ ದ್ವೇಷ, ಬಿಜೆಪಿಗೆ ಭಾರತದ ಸಂವಿಧಾನದ ಮೇಲೂ ದ್ವೇಷ, ಬಿಜೆಪಿಗೆ ಭಾರತದ ತ್ರಿವರ್ಣ ಧ್ವಜದ ಮೇಲೂ ದ್ವೇಷ. ಇಂತಹ ಬಿಜೆಪಿ ದೇಶದ್ರೋಹಿಯಲ್ಲದೆ ಇನ್ನೇನು? ಎಂದು ಪ್ರಶ್ನಿಸಿದೆ. ಸಂವಿಧಾನದ ವಿಧಿ 51ಎ(ಎ) ಪ್ರಕಾರ ಇದು ಮಹಾ ಅಪರಾಧ ಎಂದು ಹೇಳಿದೆ.

- Advertisement -



Join Whatsapp