ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್: ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

Prasthutha|

ಬೆಂಗಳೂರು: ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದ ನೂತನ ಪದಾಧಿಕಾರಿಗಳ ಪಟ್ಟಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ. ರವಿ ಅವರನ್ನು ಕೈ ಬಿಡಲಾಗಿದೆ. ಈ ಸ್ಥಾನದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾಧ್ಯಕ್ಷ ಸ್ಥಾನ ಒಲಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿವೆ.

- Advertisement -


ಆ ಪ್ರಕಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ತೆಲಂಗಾಣದ ಬಂಡಿ ಸಂಜಯ್ ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಾಡಲಾಗಿದೆ.


13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

- Advertisement -


ಕಳೆದ ವಾರವಷ್ಟೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಸಿ.ಟಿ. ರವಿ ಭೇಟಿಯಾಗಿದ್ದರು. ಬಿಎಸ್ವೈ ಆಶೀರ್ವಾದ ಪಡೆದು, ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದರು. ಅಲ್ಲದೇ ಇದು ಸೌಹಾರ್ದಯುತ ಭೇಟಿಯಷ್ಟೆ ಎಂದಿದ್ದರು.

Join Whatsapp