ಜಾರ್ಖಂಡ್: ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಇಂದು ರಾಂಚಿಯಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ಕಡೆಗೆ ತಿರುಗಿದ್ದು, ಜಿಲ್ಲಾಡಳಿತ ಹಲವೆಡೆ ಕರ್ಫ್ಯೂ ಹೇರಿದೆ.
ಶುಕ್ರವಾರದ ನಮಾಝ್ ಬಳಿಕ ಆರಂಭವಾದ ಪ್ರತಿಭಟನೆಯಲ್ಲಿ ಹಿಂಸೆ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟದಿಂದಾಗಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದೆ.