ಕರ್ಫ್ಯೂ ನಡುವೆ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿಗಳು

Prasthutha|

►ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದ ಎಎಸ್‌ಐ, ಪಿಸಿ

ಮಂಗಳೂರು : ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿದ್ದರಿಂದ ಮಂಗಳೂರಿನಲ್ಲೂ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಈ ಮಧ್ಯೆ ಮಂಗಳೂರು ಪೊಲೀಸ್ ಸಿಬ್ಬಂದಿಗಳ ಮಾನವೀಯ ಕಾರ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

- Advertisement -

ವಿಟ್ಲದಿಂದ ಮಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿ ಮಹಿಳೆಯಿರುವ ಕಾರೊಂದು ನಗರದ ಹೊರವಲಯದ ಆರ್ಕುಳ ಪೊಲೀಸ್ ಚೆಕ್ ಪೋಸ್ಟ್ ಬಳಿ ಹಾಳಾಗಿ ರಸ್ತೆಯಲ್ಲೇ ಬಾಕಿಯಾಗಿದ್ದು, ಈ ವೇಳೆ ಸ್ಥಳಕ್ಕೆ ಧಾವಿಸಿದ ಎಎಸ್ಐ ಹರೀಶ್ ಮತ್ತು ವಿಜಯ್ ಕುಮಾರ್ ಇಲಾಖೆಯ ವಾಹನದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಹರೀಶ್ ಮತ್ತು ವಿಜಯ್ ಕುಮಾರ್ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.‌

- Advertisement -