ಕಾಮನ್‌ವೆಲ್ತ್‌ ಗೇಮ್ಸ್‌ | ನಿಖಾತ್‌ ಝರೀನ್‌ ʻಗೋಲ್ಡನ್‌ ಪಂಚ್‌ʼ

Prasthutha|

ಬರ್ಮಿಂಗ್‌ಹ್ಯಾಮ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಬಾಕ್ಸಿಂಗ್‌ ವಿಭಾಗದಲ್ಲಿ ಭಾನುವಾರ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭಿಸಿದೆ. ವಿಶ್ವ ಚಾಂಪಿಯನ್‌ ಭಾರತದ ನಿಖಾತ್ ಝರೀನ್, ಕಾಮನ್‌ವೆಲ್ತ್‌ ಕ್ರೀಡಾಕೂಟದ ಬಾಕ್ಸಿಂಗ್‌ನ ಮಹಿಳೆಯರ 50 ಕೆಜಿ ವಿಭಾಗದಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ.

- Advertisement -

22ನೇ ಕಾಮನ್‌ವೆಲ್ತ್‌ ಕೂಟದಲ್ಲಿ ಭಾರತಕ್ಕೆ ಲಭಿಸಿದ 17ನೇ ಚಿನ್ನದ ಪದಕ ಇದಾಗಿದೆ. ಆ ಮೂಲಕ ಭಾರತೀಯ ಕ್ರೀಡಾಪಟುಗಳು ಗೆದ್ದ ಒಟ್ಟು ಪದಕಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಝರೀನ್‌ಗೂ  ಮೊದಲು ಮಹಿಳೆಯರ 48 ಕೆ.ಜಿ. ವಿಭಾಗದ ಬಾಕ್ಸಿಂಗ್‌ನಲ್ಲಿ ಹರ್ಯಾಣದ ನೀತು ಘಂಘಸ್ ಹಾಗೂ ಪುರುಷರ 51 ಕೆ.ಜಿ. ವಿಭಾಗದಲ್ಲಿ ಅಮಿತ್ ಪಂಘಲ್ ಅವರು ಚಿನ್ನದ ಪದಕ ಜಯಿಸಿದ್ದಾರೆ. ನಿಖಾತ್‌ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

Join Whatsapp