ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ: ಭಾರಿ ಮಳೆ, ಹಲವೆಡೆ ಭೂಕುಸಿತ

Prasthutha|

ಭುವನೇಶ್ವರ: ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು.

- Advertisement -

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.

ಒಡಿಶಾದ ಭುವನೇಶ್ವರ್, ಪುರಿ, ಪರದೀಪ್ ಮತ್ತು ಧಮ್ರಾ ಬಂದರು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಒಡಿಶಾದ ಸುಮಾರು 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಒಡಿಶಾ ಸರ್ಕಾರವು ಸುಮಾರು 800 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಭಾರತೀಯ ಕರಾವಳಿ ಕಾವಲು ಪಡೆ, ಎನ್‌ಡಿಆರ್‌ಎಫ್ ಮತ್ತು ಒಡಿಆರ್‌ಎಫ್ ತಂಡಗಳು ರಕ್ಷಣೆ, ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.

- Advertisement -

ಡಾನಾ ಚಂಡಮಾರುತವು ಪಶ್ಚಿಮ ಬಂಗಾಳದಲ್ಲೂ ಭಾರಿ ಹಾನಿಯನ್ನು ಉಂಟುಮಾಡಿದೆ. ಸಿಎಂ ಮಮತಾ ಬ್ಯಾನರ್ಜಿ ರಾತ್ರಿಯಿಡೀ ಜಾಗರಣೆ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್‌ಗಢದ ಮೂಲಕ ಹಾದುಹೋಗುವ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.



Join Whatsapp