Home ಕರಾವಳಿ ಚಂಡಮಾರುತ ಎಫೆಕ್ಟ್: ಇಂದಿನಿಂದ ಕರಾವಳಿಯಲ್ಲಿ ಎರಡು ದಿನ ಮಳೆ

ಚಂಡಮಾರುತ ಎಫೆಕ್ಟ್: ಇಂದಿನಿಂದ ಕರಾವಳಿಯಲ್ಲಿ ಎರಡು ದಿನ ಮಳೆ

ಮಂಗಳೂರು:  ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಅಸಾನಿ ಚಂಡಮಾರುತದ ಪ್ರಭಾವ ಉಂಟಾಗಿದ್ದು, ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ಕರಾವಳಿ, ಉತ್ತರ ಒಳನಾಡು, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗಲಿದೆ.

ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೇ 12ರವರೆಗೆ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆ, ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದೆ. ಈ ಪರಿಣಾಮವಾಗಿ, ಇಂದು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Join Whatsapp
Exit mobile version