Home ರಾಜ್ಯ ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಎರಡೂ ಕರಾವಳಿಗಳಲ್ಲಿ ಉಂಟಾಗಿದ್ದ ಚಂಡಮಾರುತಗಳು ರಾಜ್ಯದ ಒಳನಾಡಿನಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗಿ ನಿರೀಕ್ಷೆಗೂ ಮೀರಿದ ಹಿಂಗಾರು ಮಳೆಯನ್ನು ಸುರಿಸಿವೆ.
ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ದಕ್ಷಿಣ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ನೀಡಲಾಗಿದೆ.


ತಮಿಳುನಾಡಿನಲ್ಲಿ ಮಾತ್ರ ವಾಯುಭಾರ ಕುಸಿತ ಮುಂದುವರೆದಿದ್ದು, 5.8 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ, ಇಂದಿನಿಂದ ಕೊಂಚ ಅಬ್ಬರ ತಗ್ಗಿದಂತೆ ಕಂಡುಬಂದರೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.


ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ತುಮಕೂರು, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ವರ್ಷಧಾರೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Join Whatsapp
Exit mobile version