ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ: ಮಧ್ಯಂತರ ಪರಿಹಾರ ನೀಡುವಂತೆ ಪ್ರಧಾನಿಗೆ ಪತ್ರ ಬರೆದ ಸ್ಟಾಲಿನ್

Prasthutha|

ಚೆನ್ನೈ: ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಕ್ಷಣವೇ 5060 ಕೋಟಿ ರೂ. ಮಧ್ಯಂತರ ಪರಿಹಾರ ನಿಧಿ ನೀಡುವಂತೆ ಒತ್ತಾಯಿಸಿದ್ದಾರೆ.

- Advertisement -

ರಾಜ್ಯದಲ್ಲಿ ಚಂಡಮಾರುತದಿಂದ ಆಗಿರುವ ಹಾನಿಯನ್ನು ಪರಿಶೀಲಿಸಲು ಕೇಂದ್ರದ ತಂಡವನ್ನು ಕಳುಹಿಸುವಂತೆಯೂ ಸಿಎಂ ಸ್ಟಾಲಿನ್ ಪ್ರಧಾನಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿರುವ ಡಿಎಂಕೆ ಸಂಸದ ಟಿಆರ್ ಬಾಲು ಅವರು ಪ್ರಧಾನಿ ಮೋದಿಯವರಿಗೆ ಖುದ್ದಾಗಿ ಪತ್ರವನ್ನು ನೀಡಲಿದ್ದಾರೆ.

Join Whatsapp