Home ಕರಾವಳಿ ಚಂಡಮಾರುತದ ಭೀತಿ: ಕರಾವಳಿಯಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

ಚಂಡಮಾರುತದ ಭೀತಿ: ಕರಾವಳಿಯಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆ ಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಜಿಲ್ಲಾಡಳಿತದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರಿಗೆ ಕೆಲವು ಸೂಚನೆಗಳನ್ನು ನೀಡಿದ್ದು, ಅದನ್ನು ಪಾಲಿಸುವಂತೆ ತಿಳಿಸಲಾಗಿದೆ.

1.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು.

  1. ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  2. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು.
  3. ಪ್ರವಾಸಿಗರು/ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು.
Join Whatsapp
Exit mobile version