ದಾವಣಗೆರೆ: ಮನೆಯಲ್ಲಿ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಮಗ ಮೃತಪಟ್ಟು, ತಾಯಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದಿದೆ.
ಶುಭಾಶ್ ಪೂಜಾರ್ ಮೃತಪಟ್ಟಿದ್ದು, ತಾಯಿ ಗುತ್ತ್ಯಮ್ಮನಿಗೆ ಗಂಭೀರ ಗಾಯಗಳಾಗಿವೆ.
ಸಿಲಿಂಡರ್ ತಂದು ಫಿಕ್ಸ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಮಹಿಳೆಗೆ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.