ಕಾರ್ಮಿಕರ ಶೆಡ್‌ನಲ್ಲಿ ಸಿಲಿಂಡರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

Prasthutha|

ಕಾರವಾರ: ಕಾರ್ಮಿಕರ ವಸತಿ ಪ್ರದೇಶದಲ್ಲಿ 3 ಸಿಲಿಂಡರ್ ಸ್ಫೋಟಗೊಂಡು ಐದಕ್ಕೂ ಅಧಿಕ ಶೆಡ್‌ಗಳು ಸುಟ್ಟು ಭಸ್ಮವಾಗಿರುವ ಘಟನೆ ಮುದಗಾ ಲೇಬರ್ ಕಾಲೋನಿಯಲ್ಲಿ ನಡೆದಿದೆ.

- Advertisement -


ನೌಕಾನೆಲೆ ಕಟ್ಟಡ ಕಾಮಗಾರಿ ನಡೆಸುತ್ತಿರುವ ಕಾರ್ಮಿಕರಿಗೆ ಮುದಗಾದ ಸೀಬರ್ಡ್ ಕಾಲೋನಿಯಲ್ಲಿ ಶೆಡ್ ಹಾಕಿಕೊಡಲಾಗಿತ್ತು. ಒಡಿಶಾ ಸೇರಿದಂತೆ ಹೊರ ರಾಜ್ಯದ 100ಕ್ಕೂ ಅಧಿಕ ಕಾರ್ಮಿಕರು ಇಲ್ಲಿ ವಾಸ್ತವ್ಯ ಹೂಡಿದ್ದರು.
ಇಂದು ಮುಂಜಾನೆ ರೆಗ್ಯೂಲೇಟರ್​​ನಲ್ಲಿ ಸೋರಿಕೆಯುಂಟಾಗಿ ಒಂದು ದೊಡ್ಡ ಸಿಲಿಂಡರ್ ಹಾಗೂ ಎರಡು ಸಣ್ಣ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಶೆಡ್‌ನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಸ್ಪೋಟಗೊಳ್ಳುತ್ತಿದ್ದಂತೆ ಸುತ್ತಮುತ್ತಲಿನ‌ ಕಾರ್ಮಿಕರು ಸ್ಥಳದಿಂದ ಓಡಿ ಹೋಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಘಟನೆಯಲ್ಲಿ ಬಟ್ಟೆ, ಪಾತ್ರೆ, ಅಡಿಗೆ ಸಾಮಗ್ರಿ ಹಾಗೂ 25ಕ್ಕೂ ಅಧಿಕ ಮೊಬೈಲ್‌ಗಳು ಬೆಂಕಿಗಾಹುತಿಯಾಗಿದೆ. ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp