ಸಿಲಿಂಡರ್ ಸ್ಫೋಟ : ಗಾಯಗೊಂಡಿದ್ದ ದಂಪತಿ ಮೃತ್ಯು

Prasthutha|

ಕೋಲಾರ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

- Advertisement -

ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದ ದಂಪತಿ ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ವಾಸವಿದ್ದರು.

ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯ ಪರಿಣಾಮ ತೀವ್ರ ಗಾಯಗೊಂಡ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ.

- Advertisement -

 ಸಿಲಿಂಡರ್ ಬ್ಲಾಸ್ಟ್‌ನಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Join Whatsapp