Home ಟಾಪ್ ಸುದ್ದಿಗಳು ದ.ಕ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದ.ಕ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ಬೆಂಗಳೂರು: ಬಡಜನರ ರಕ್ತ ಹೀರುತ್ತಿರುವ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕಿ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು ಬುದ್ಧಿವಂತರ ಜಿಲ್ಲೆಯ ಪರವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎಸ್ಡಿಪಿಐ ನಾಯಕ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.

ದ‌.ಕ. ಜಿಲ್ಲೆಯಲ್ಲಿ ಎಂಟು ಮೆಡಿಕಲ್ ಕಾಲೇಜುಗಳಿದ್ದರೂ ಒಂದೇ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ.? ಒಂದೇ ಒಂದು ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎನ್ನುವುದು ಕೇವಲ ರಾಜಕಾರಣದ ಸೋಲು ಮಾತ್ರವಲ್ಲ, ಈ ಜಿಲ್ಲೆಯ ರಾಜಕಾರಣಿಗಳಿಗೆ ಸಹ ನಾಚಿಕೆಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದ.ಕ ಜಿಲ್ಲೆಯ ಜನಪ್ರತಿನಿಧಿಯಾಗಿದ್ದ ಯು. ಶ್ರೀನಿವಾಸ ಮಲ್ಯ 1950ರಂದು ದ.ಕ ಜಿಲ್ಲೆಗೆ ತಾಂತ್ರಿಕ ಶಿಕ್ಷಣ ಕೇಂದ್ರ ಬೇಕೆಂದು ಪಾರ್ಲಿಮೆಂಟ್ ಮುಂದೆ ಧರಣಿ ಕುಳಿತಿದ್ದರು. ಅಂತಹ ಇಚ್ಛಾಶಕ್ತಿಯ ಕೊರತೆಯುಳ್ಳ ರಾಜಕಾರಣಿಗಳು ನಮ್ಮಲ್ಲಿದ್ದಾರೆ. ರಾಜಕಾರಣಿಗಳಿಗೆ ರೋಗ ಬಂದಲ್ಲಿ ಅವರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಮಲಗುತ್ತಾರೆ. ಆದರೆ ಅವ್ಯವಸ್ಥೆಗಳಿದ್ದರೂ ಬಡವರಿಗೆ ಕಾಯಿಲೆ ಬಂದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಬೇಕಾಗುತ್ತದೆ. ರಾಜಕಾರಣಿಗಳಿಗೆ ಇಚ್ಛಾಶಕ್ತಿ ಇದ್ದಲ್ಲಿ‌ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಬೇಕು. ಖಾಸಗಿ ಮೆಡಿಕಲ್ ಆಸ್ಪತ್ರೆಗಳ ಮಾಲಕರು ದೊಡ್ಡ ದೊಡ್ಡ ಸಾಮ್ರಾಜ್ಯಗಳನ್ನು ಕಟ್ಟುತ್ತಿದ್ದಾರೆ. ಮಾತ್ರವಲ್ಲ, ವೆನ್ಲಾಕ್ ಆಸ್ಪತ್ರೆಯನ್ನೂ ನುಂಗಲು ಹೊರಟಿದ್ದಾರೆ‌ ಎಂದ ಅಫ್ಸರ್, ತಕ್ಷಣ ದ.ಕ ಜಿಲ್ಲೆಗೆ ಒಂದಾದರೂ ಸರ್ಕಾರಿ ಮೆಡಿಕಲ್ ಕಾಲೇಜು ಬೇಕೇ ಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp
Exit mobile version