Home ಟಾಪ್ ಸುದ್ದಿಗಳು ಧರ್ಮಸ್ಥಳ ಸೌಜನ್ಯಾ ಹೋರಾಟಕ್ಕೆ ಬೆಂಬಲ ಸೂಚಿಸಿದ ದ.ಕ.ಜಿಲ್ಲಾ ವಿಮೆನ್ ಇಂಡಿಯಾ ಮೂವ್ಮೆಂಟ್

ಧರ್ಮಸ್ಥಳ ಸೌಜನ್ಯಾ ಹೋರಾಟಕ್ಕೆ ಬೆಂಬಲ ಸೂಚಿಸಿದ ದ.ಕ.ಜಿಲ್ಲಾ ವಿಮೆನ್ ಇಂಡಿಯಾ ಮೂವ್ಮೆಂಟ್

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ಆಗಸ್ಟ್ 28 ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ವಿವಿಧ ಸಂಘಟನೆಗಳ ರಾಜ್ಯಮಟ್ಟದ ಸಾಮೂಹಿಕ ಪ್ರತಿಭಟನೆ ಮತ್ತು ಬೆಳ್ತಂಗಡಿ ಚಲೋಗೆ ದ.ಕ.ಜಿಲ್ಲಾ ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರಾದ ನೌರಿನಾ ಆಲಂಪಾಡಿ ಬೆಂಬಲ ಸೂಚಿಸಿದ್ದಾರೆ.

ಸೌಜನ್ಯ ಪ್ರಕರಣದಲ್ಲಿ ಸೌಜನ್ಯರ ಕುಟುಂಬ ಮತ್ತು ರಾಜ್ಯದ ಜನತೆ ಸಮರ್ಪಕ ನ್ಯಾಯದ ನಿರೀಕ್ಷೆಯಲ್ಲಿದೆ. ಹಾಗಾಗಿ, ಜನ ಅಭಿಪ್ರಾಯ ರೂಢಿಯಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ವಿಮೆನ್ ಇಂಡಿಯಾ ಮೂವ್ಮೆಂಟ್(WIM) ಕೂಡಾ ಬೆಂಬಲ ಘೋಷಿಸಿವೆ. ಬೆಳ್ತಂಗಡಿಯಲ್ಲಿ ಆಗಸ್ಟ್ 28 ರಂದು ನಡೆಯುವ ಬೆಳ್ತಂಗಡಿ ಚಲೋ ಕಾರ್ಯಕ್ರಮದಲ್ಲಿ ಮಹಿಳಾ ಹೋರಾಟಗಾರರು, ಚಿಂತಕರು, ನಾಡಿನ ಸಾಹಿತಿಗಳು ನಾಗರೀಕರು ಭಾಗವಹಿಸಲಿದ್ದಾರೆ. ಈಗಾಗಲೇ ಸೌಜನ್ಯ ಕುಟುಂಬ ಮತ್ತು ಸೌಜನ್ಯ ಪರ ಹೋರಾಟಗಾರರಿಗೆ ಬೆಂಬಲ ಸೂಚಿಸಿದ್ದಾರೆ.

ಸೌಜನ್ಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ನ್ಯಾಯಾಲಯ ಸರಿಯಾದ ರೀತಿಯಲ್ಲಿ ತನಿಖೆ ನಡೆಸುವಂತೆ ಆದೇಶಿಸಬೇಕು. ತಪ್ಪಿತಸ್ಥರಿಗೆ ಕೂಡಲೇ ಶಿಕ್ಷೆ ಆಗಬೇಕು. ಯಾವುದೇ ರಾಜಕೀಯ ಪ್ರಭಾವಕ್ಕೂ ಬಲಿಯಾಗದಂತೆ ತನಿಖೆ ಮಾಡಬೇಕು.
ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯ. ಈ ಕರ್ತವ್ಯ ನಿಭಾಯಿಸದೆ ಹೋದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ, ಸೌಜನ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌರಿನಾ ಒತ್ತಾಯಿಸಿದರು.

Join Whatsapp
Exit mobile version