Home ಟಾಪ್ ಸುದ್ದಿಗಳು ದ.ಕ. ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ

ದ.ಕ. ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಂಜೆ ಹೊತ್ತಿಗೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಿದೆ.

ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಿದೆ.

ಮಂಗಳೂರು ನಗರದಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆ ಹೊತ್ತಿಗೆ ಭಾರೀ ಮಳೆ ಸುರಿದಿದೆ.

ಮುಂದಿನ‌‌ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Join Whatsapp
Exit mobile version