ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆಯಾಗಲಿದೆ ಎಂದಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಮುಂದಿನ 2-3 ದಿನಗಳಲ್ಲಿ ಚಂಡಮಾರುತವಾಗಿ ಉಂಟಾಗಲಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಡಿ.16ರಿಂದ ಡಿ.18 ರವರೆಗೆ ಭಾರಿ ಮಳೆ ಸುರಿಯಲಿದೆ. ನಂತರ ಕ್ರಮೇಣ ಇಳಿಮುಖವಾಗಲಿದೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಡಿ.17ರಿಂದ ಡಿ.19ರವರೆಗೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.