ಬೆಂಗಳೂರು: ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಪದ್ಮನಾಭ ಸಾವಿನ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.
ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಕಾಂಗ್ರೆಸ್ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಪದ್ಮನಾಭರವರ ಶವ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿರುವುದು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇದು ಆತ್ಮಹತ್ಯೆಯೋ ಅಥವಾ ಇನ್ಯಾವುದೋ ಕಾರಣಕ್ಕೆ ನಡೆದಿರುವ ಕೊಲೆಯೋ ಎಂಬ ಬಗ್ಗೆ ತನಿಖೆ ನಡೆಸಲು ಆಗ್ರಹಿಸುತ್ತೇನೆ ಎಂದು ಅಫ್ಸರ್ ಕೊಡ್ಲಿಪೇಟೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.