ಡಿ.ಕೆ. ಶಿವಕುಮಾರ್‌ಗೆ ಲೋಕಾಯುಕ್ತ ನೋಟಿಸ್

Prasthutha|

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧವಾಗಿ ದಾಖಲೆ ಒದಗಿಸಲು ಈ ನೋಟಿಸ್ ನೀಡಲಾಗಿದೆ.

- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸರ್ಕಾರ ರದ್ದು ಮಾಡಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಬಳಿಕ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿಯನ್ನು ತಮಗೆ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂಗೆ ನೋಟಿಸ್ ನೀಡಿದ್ದಾರೆ.

- Advertisement -

ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎನ್ನುವುದು ಸಿಬಿಐ ಆರೋಪಿಸಲಾಗಿತ್ತು. ಮಾರ್ಚ್ 2020ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ 5, 2020ರಲ್ಲಿ ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್​ಡಿಸ್ಕ್, ₹ 57 ಲಕ್ಷ ನಗದು​ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.



Join Whatsapp