Home ಟಾಪ್ ಸುದ್ದಿಗಳು ದ.ಕ. ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ

ದ.ಕ. ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದೆ.

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾಸನ, , ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಬುಧವಾರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಈ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಶುಕ್ರವಾರ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಶುಕ್ರವಾರ ನಡೆಯಲಿರುವ ಚುನಾವಣೆ ರಾಜ್ಯದಲ್ಲಿ ಮೊದಲ ಹಂತವಾದರೂ, ದೇಶದಲ್ಲಿ ಎರಡನೇ ಹಂತದ ಚುನಾವಣೆಯಾಗಿದೆ. ಎರಡನೇ ಹಂತದಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ಮಾಡುವುದಾಗಿ ಚುನಾವಣಾ ಆಯೋಗ ಘೋಷಿಸಿತ್ತು, ಆದರೆ ಮಧ್ಯಪ್ರದೇಶದ ಬೆತುಲ್ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಅಶೋಕ್ ಭಾಲ್ವಿ ಅವರ ನಿಧನದಿಂದಾಗಿ ಈ ಸ್ಥಾನದ ಮತದಾನವನ್ನು ಮುಂದೂಡಲಾಗಿದೆ.

Join Whatsapp
Exit mobile version