ಡಿ.ಕೆ. ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಜಿಟಿ ದೇವೇಗೌಡ

Prasthutha|

ಮೈಸೂರು: ಡಿ.ಕೆ. ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ಮಾಜಿ ಸಚಿವ ಜಿಟಿ ದೇವೇಗೌಡ ಹೇಳಿದ್ದಾರೆ.

- Advertisement -

ಮೈಸೂರಿನಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು ಎಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಮಾತಿನಲ್ಲಿ ರಾಜಕೀಯ ತಂತ್ರಗಾರಿಕೆ ಇದೆ ಅಷ್ಟೇ. ಡಿ.ಕೆ. ಸುರೇಶ್ ಅವರನ್ನು ಸ್ಪರ್ಧೆಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೇ ಮತ ಹಾಕುತ್ತೀರಾ ಎಂದು ಜನರನ್ನು ಕೇಳುತ್ತಿದ್ದಾರೆ ಅಷ್ಟೇ ಎಂದು ಜಿಟಿಡಿ ಹೇಳಿದ್ದಾರೆ.

ಡಿಕೆಶಿ ಸ್ಪರ್ಧೆ ಬಗ್ಗೆ ಚಲುವರಾಯಸ್ವಾಮಿ ಹೇಳಿಕೆ

- Advertisement -

ಇತ್ತ ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೆ ವಿಚಾರಕ್ಕೆ ಸಚಿವ ಚಲುವರಾಯಸ್ವಾಮಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದ ಮಾಗಡಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣಕ್ಕೆ ಯಾರು ಅಭ್ಯರ್ಥಿ ಎಂದು ಸಿಎಂ, ಡಿಸಿಎಂ, ಮಾಜಿ ಸಂಸದರು ತಿರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

Join Whatsapp