ಇ.ಡಿ ಮುಂದೆ ಹಾಜರಾದ ಡಿ.ಕೆ. ಶಿವಕುಮಾರ್

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಕಚೇರಿಗೆ ಹಾಜರಾಗಿದ್ದಾರೆ.
ಸದ್ಯ, ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಹೊಣೆ ಹೊತ್ತಿರುವ ಶಿವಕುಮಾರ್, ಗುರುವಾರ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು. ಕಳೆದ ಸೆಪ್ಟೆಂಬರ್ 19ರಂದು ಇ.ಡಿ ಮುಂದೆ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದರು.



Join Whatsapp