ಬೆಂಗಳೂರು; ಭಾರತದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ “ಡಿಎಸ್-ಮ್ಯಾಕ್ಸ್” ಪ್ರಾಪರ್ಟೀಸ್ ಪೈ. ಲಿಮಿಟೆಡ್ ಸಂಸ್ಥೆಯಿಂದ ಕೊಡಮಾಡುವ ಪ್ರತಿಷ್ಠಿತ ಡಿ.ಎಸ್. ಮ್ಯಾಕ್ಸ್ ರತ್ನಶ್ರೀ ಗೆ ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಕಿರಣ್ ಕುಮಾರ್, ಸಾಣೆ ಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯಸ್ವಾಮೀಜಿ, ಪರಿಸರ ವಾದಿ ಪದ್ಮಶ್ರೀ ತುಳಸಿ ಗೌಡ ಸೇರಿ 11 ಮಂದಿ ಆಯ್ಕೆಯಾಗಿದ್ದು, ಇದೇ 19 ರಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಇವರಲ್ಲದೇ ಹಿರಿಯ ನಟಿ ಡಾ. ಭಾರತಿ ವಿಷ್ಣುವರ್ಧನ್, ಸಾಲುಮರದ ತಿಮ್ಮಕ್ಕ, ರಂಗ ಭೂಮಿ ಕಲಾವಿದೆ ಬಿ. ಮಂಜಮ್ಮ ಜೋಗತಿ, ಕವಿ, ಗೀತೆ ರಚನೆಗಾರ ಡಾ. ದೊಡ್ಡರಂಗೇಗೌಡ, ಜಾಗತಿಕ ಪ್ಯಾರಾ ಅಥ್ಲೀಟ್ ಮಾಲತಿ ಹೊಳ್ಳ ಕೃಷ್ಣಮೂರ್ತಿ ಹಾಗೂ ರಾಷ್ಟ್ರೀಯ ಮಹಿಳಾ ಸಾಧಕಿ ಸಬಿತಾ ಮೋನಿಸ್ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಡಿಎಸ್-ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಖ್ಯಾತ ಸಾಹಿತಿ, ನಟ, ನಿರ್ದೇಶಕ ತಣಿಕೆಲ್ಲ ಭರಣಿ ಆಯ್ಕೆಯಾಗಿದ್ದು, ಈ ಎಲ್ಲಾ ಪ್ರಶಸ್ತಿಗಳು 25 ಸಾವಿರ ರೂಪಾಯಿ ನಗದು ಹಾಗೂ ಸ್ಮರಣ ಸಂಚಿಕೆಗಳನ್ನು ಒಳಗೊಂಡಿದೆ ಎಂದು ಡಿ.ಎಸ್. ಮ್ಯಾಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಪಿ. ದಯಾನಂದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಅಮೋಘ ಸೇವೆಸಲ್ಲಿಸಿದ ಸಾಧಕರನ್ನು ಗೌರವಿಸಲಾಗುತ್ತಿದೆ. ಈ ಬಾರಿಯ ವಾರ್ಷಿಕೋತ್ಸವ ಜೂನ್ 19 ರಂದು ಮಧ್ಯಾಹ್ನ 2:30 ಕ್ಕೆ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪರುವ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.
ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಸತಿ ಮತ್ತು ಮೂಲ ಸೌಕರ್ಯ ವಿ. ಸೋಮಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜೂಗೌಡ, ಪಬ್ಲಿಕ್ ಟಿ.ವಿ. ಸಂಸ್ಥಾಪಕ ಹೆಚ್.ಆರ್. ರಂಗನಾಥ್, ಡಿ.ಎಸ್ ಮ್ಯಾಕ್ಸ್ ಸಂಸ್ಥೆಯ ಅಧ್ಯಕ್ಷ ಕೆ.ವಿ. ಸತೀಶ್ ಅವರು ಸಾಧಕರನ್ನು ಗೌರವಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಚಲನಚಿತ್ರರಂಗದ ನಾಯಕ ನಟ ನಟಿಯರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ದೇಶದ ಪ್ರಖ್ಯಾತ ಕಲಾವಿದರಿಂದ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. “ಪ್ಲಾಟ್ ಪತ್ನಿ” ಬಹುಮಾನ ವಿತರಣೆ: ಸಂಸ್ಥೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಸ್ಥೆಯಿಂದ ಮನೆಗಳನ್ನು ಖರೀದಿಸಿರುವ ಗ್ರಾಹಕರಿಗಾಗಿ ಸಂಸ್ಥೆ ಕೋಟ್ಯಾಂತರ ರೂಪಾಯಿ ಮೌಲ್ಯದ 166 ಮಂದಿಗೆ ಬಹುಮಾನ ನೀಡಲಾಗುತ್ತಿದೆ.
ಪ್ರಥಮ ಬಹುಮಾನವಾಗಿ ಮೂವರಿಗೆ 2 ಬೆಡ್ ರೂಂ ಪ್ಲಾಟ್, ದ್ವಿತೀಯ ಬಹುಮಾನ – ಮೂವರಿಗೆ ಕಾರ್, ಮೂರನೇ ಬಹುಮಾನ- 60 ಮಂದಿಗೆ ದ್ವಿಚಕ್ರ ವಾಹನಗಳು, ನಾಲ್ಕನೇ ಬಹುಮಾನ 100 ಕ್ಕೂ ಮಂದಿಗೆ ಗೃಹ ಉಪಯೋಗಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಈ ಎಲ್ಲಾ ಪ್ರಶಸ್ತಿ ವಿಜೇತರನ್ನು ಸಮಾರಂಭದಲ್ಲೇ ಗಣ್ಯರಿಂದ ಲಾಟರಿ ಮೂಲಕ ನೇರ ಆಯ್ಕೆಮಾಡಿ ಈ ಸಮಾರಂಭದಲ್ಲೇ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಕೊರೋನಾ ಕಾರಣದಿಂದ ಎರಡು ವರ್ಷಗಳಿಂದ ಡಿಎಸ್ ಮಾಕ್ಸ್ ವಾರ್ಷಿಕ ಸಮಾರಂಭ ನಡೆಸಲು ಸಾಧ್ಯವಾಗಲಿಲ್ಲ. ಆದರೆ ಕರೋನಾ ಸಮಯದಲ್ಲಿ ಸಂಸ್ಥೆಯಲ್ಲಿ ಕೆಲಸಮಾಡುವ ಕಾರ್ಮಿಕರು ಮತ್ತು ಬಡವರಿಗೆ ಊಟ, ವಸತಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ನೀಡಿದ್ದೇವೆ. ಸಂಸ್ಥೆಯ ಕಾರ್ಮಿಕರು ಹಾಗೂ ಕುಟುಂಬ ವರ್ಗದವರು ತಮ್ಮ ತಮ್ಮ ಊರುಗಳಿಗೆ ವಲಸೆ ಹೋಗದಂತೆ ನೋಡಿಕೊಂಡು ಕಾರ್ಮಿಕರ ಹಿತ ಕಾಯುವ ಕೆಲಸವನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂದು ಹೇಳಿದರು.
ಎಲ್ಲಾ ಕಾರ್ಮಿಕರಿಗೆ ಊಟೋಪಚಾರದ ಜತೆ ಆರ್ಥಿಕ ನೆರವು ನೀಡಿದ ಡಿಎಸ್ ಮಾಕ್ಸ್ ಸಂಸ್ಥೆ ಕಾರ್ಮಿಕರ ಪರವಾಗಿದೆ ಎಂಬ ಬದ್ಧತೆಯನ್ನು ತೋರಿತ್ತು. ಡಿಎಸ್ ಮಾಕ್ಸ್ ಸಂಸ್ಥೆಯ ಈ ಜನೋಪಯೋಗಿ ಕಾರ್ಯಗಳಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದುದ್ದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.
ಡಿಎಸ್ ಮ್ಯಾಕ್ಸ್ ಸಂಸ್ಥೆ ಕಳೆದ ಹಲವು ವರ್ಷಗಳಿಂದ ವಾರ್ಷಿಕೋತ್ಸವ ಸಮಾರಂಭದಲ್ಲಿ ರಂಗಭೂಮಿ, ಚಲನಚಿತ್ರ ರಂಗದ ಹಿರಿಯ ಚೇತನಗಳನ್ನು ಸನ್ಮಾನಿಸಿದೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಂದು ನಾಡಿನ ಖ್ಯಾತ ಸಾಹಿತಿಗಳಿಗೆ “ಡಿಎಸ್ ಮ್ಯಾಕ್ಸ್ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸುವ ಕೆಲಸವನ್ನು ಮಾಡುತ್ತಾ ಬಂದಿದೆ.
ನಮ್ಮ ಸಂಸ್ಥೆ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ವರ್ಷ ಸಾವಿರಾರು ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಅಂಗವಿಕಲರಿಗೆ ನೆರವು ನೀಡುವ ನಿಟ್ಟಿನಲ್ಲಿ ಟ್ರೈಸಿಕಲ್ ನೀಡುವ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.
ಮೋದಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಪ್ರತಿ ತಿಂಗಳು ಬಡ ಗ್ರಾಮೀಣ ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದು, ಈ ಶಸ್ತ್ರಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುತ್ತಿದೆ. ಇದುವರೆಗೆ ಸಾವಿರಾರು ಮಂದಿಗೆ ಕಣ್ಣಿನ ಶಸ್ತ್ರಚಿಕಿತ್ಸೆಮ ಬಡ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೂ ನೆರವು ನೀಡಲಾಗಿದೆ. ಪ್ರತಿವರ್ಷ ನಮ್ಮ ಸಂಸ್ಥೆಯಿಂದ ಚಿತ್ರದರ್ಗದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಶಿವಮೂರ್ತಿ ಮುರಘ ಶರಣರ ಸಾನಿಧ್ಯದಲ್ಲಿ ನೂರಾರು ಜೊಡಿಗಳ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರಲಾಗಿದೆ ಎಂದರು.