ದಕ್ಷಿಣ ಕನ್ನಡ: ಮೂರನೇ ದಿನ 15 ಅಭ್ಯರ್ಥಿಗಳಿಂದ ಉಮೇದುವಾರಿಕೆ ಸಲ್ಲಿಕೆ

Prasthutha|

ಮಂಗಳೂರು: ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ದಿನವಾದ ಏ.17ರ ಸೋಮವಾರ 14 ಪುರುಷ ಹಾಗೂ ಮಹಿಳಾ ಅಭ್ಯರ್ಥಿಯೊಬ್ಬರು ಸೇರಿದಂತೆ 15 ಅಭ್ಯರ್ಥಿಗಳಿಂದ 23 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾಗಿವೆ.

- Advertisement -

ಬೆಳ್ತಂಗಡಿ ಕ್ಷೇತ್ರದಿಂದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಆದಿತ್ಯ ನಾರಾಯಣ ಕೊಲ್ಲಾಜೆ, ಭಾರತೀಯ ಜನತಾ ಪಕ್ಷದಿಂದ ಹರೀಶ್ ಪೂಂಜಾ ಎರಡು ನಾಮಪತ್ರಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ರಕ್ಷಿತ್ ಶಿವರಾಂ ಎರಡು ನಾಮಪತ್ರಗಳು, ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ವಿಜಯನಾಥ ವಿಠ್ಠಲ್ ಶೆಟ್ಟಿ, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಅಲ್ಫಾನ್ಸೋ ಫ್ರಾಂಕೋ,

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಿಥುನ್ ಎಂ ರೈ ಮೂರು ನಾಮಪತ್ರಗಳು, ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿಯಾಗಿ ದಯಾನಂದ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಜನರಲ್ ಪಾರ್ಟಿಯಿಂದ ಪ್ರಶಾಂತ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ವೇದವ್ಯಾಸ್ ಕಾಮತ್ 4 ನಾಮಪತ್ರಗಳು, ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಕುಂಪಲ, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಿಂದ ರಿಯಾಝ್ ಫರಂಗಿಪೇಟೆ, ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಸೋಷಿಯಲ್‌ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಇಲ್ಯಾಸ್ ತುಂಬೆ,  ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ನ ಅಭ್ಯರ್ಥಿಯಾಗಿ ಅಬ್ದುಲ್ ಮಜೀದ್ ಖಾನ್, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಬಿ.ಕೆ. ವಿಶು ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಕ್ಷದಿಂದ ರಮೇಶ್ ಬಿ. ನಾಮಪತ್ರ ಸಲ್ಲಿಸಿದ್ದಾರೆ.

- Advertisement -

 ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.



Join Whatsapp