ದಕ್ಷಿಣ ಕನ್ನಡ: ಜುಲೈ 5ರಿಂದ ಮಸೀದಿ, ಮಂದಿರ, ಚರ್ಚ್‌ಗಳು ಓಪನ್

Prasthutha|

ಮಂಗಳೂರು: ರಾಜ್ಯ ಸರಕಾರವು ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ ಸೋಮವಾರದಿಂದ(ಜು.5) ಧಾರ್ಮಿಕ ಕೇಂದ್ರಗಳಾದ ಮಸೀದಿ, ಮಂದಿರ, ಚರ್ಚ್ ಗಳನ್ನು ತೆರೆಯಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಧಾರ್ಮಿಕ ಕೇಂದ್ರಗಳನ್ನು ತೆರೆಯಬಹುದು ಎಂದು ರಾಜ್ಯ ಸರಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಸೀದಿ, ಮಂದಿರ, ಚರ್ಚ್‌ಗಳನ್ನು ತೆರೆಯಬಹುದಾಗಿದೆ. ಆದರೆ ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಸೋಂಕಿನ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಸೂಚಿಸಿದ್ದಾರೆ



Join Whatsapp