ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ. ವಿ ಅವರನ್ನು ಸರಕಾರ ದಿಢೀರ್ ಆಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ವರ್ಷ 3 ತಿಂಗಳು ಕಾಲ ಸೇವೆ ಸಲ್ಲಿಸಿದ್ದ, ದಕ್ಷ ಹಾಗೂ ಖಡಕ್ ಅಫೀಸರ್ ಎಂದೇ ಖ್ಯಾತರಾಗಿದ್ದ ಡಾ| ರಾಜೇಂದ್ರ ಕೆ. ವಿ ಅವರನ್ನು ಸೇರಿಸಿ ಒಟ್ಟು 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಅಲ್ಲದೇ 4 ಐಎಎಸ್ ಅಧಿಕಾರಿಗೆ ಹೆಚ್ಚುವರಿ ಅಧಿಕಾರವನ್ನು ನೀಡಲಾಗಿದೆ
2013 ನೇ ಬ್ಯಾಚಿನ ಐಎಎಸ್ ಅಫೀಸರ್ ಆಗಿರುವ ಡಾ| ರಾಜೇಂದ್ರ ಕೆ. ವಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಉತ್ತುಂಗದಲ್ಲಿದ್ದ 2020ರ ಜುಲೈ ತಿಂಗಳಿನಲ್ಲಿ ಅಧಿಕಾರ ಸ್ವೀಕರಿಸಿದರು. ಇವರ ಕಾರ್ಯ ವೈಖರಿಗೆ ಜಿಲ್ಲೆಯ ಜನಸಾಮಾನ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು