ನೆರೆ, ಮಳೆ ಹಾನಿ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು.

 ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು,  ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ  ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

 ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

 ಬಜಪೆ ಅದ್ಯಪಾಡಿ, ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ  ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಅದ್ಯಪಾಡಿಯಲ್ಲಿ ದೋಣಿಯಲ್ಲಿ ಸಂಚರಿಸಿ, ನೆರೆ ಪರಿಸ್ಥಿತಿ ವೀಕ್ಷಿಸಿದರು.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.



Join Whatsapp