ಕಲ್ಲಡ್ಕ ಮ್ಯೂಸಿಯಂಗೆ ದ.ಕ. ಜಿಲ್ಲಾಧಿಕಾರಿ ಭೇಟಿ

Prasthutha|

ಬಂಟ್ವಾಳ : ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿದರು.

ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಬಳಿಕ ಮ್ಯೂಸಿಯಂಗೆ ಭೇಟಿ ನೀಡಿ ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement -


ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Join Whatsapp